ಬಾಗಲಕೋಟೆ: ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆಯ ನಂತರ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಬಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಭರ್ಜರಿ ಸ್ವಾಗತ ಕೋರಿದರು.

ಸಿದ್ದರಾಮಯ್ಯ ಮಧ್ಯಾಹ್ನ ಬಾಗಲಕೋಟೆ ಜಿಲ್ಲೆ ಪ್ರವೇಶಿಸುತ್ತಿದ್ದಂತೆಯೇ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ನ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಕಾರಿಗೆ ಪುಷ್ಪವೃಷ್ಟಿ ಮಾಡಿದರು. ಮಳೆಯನ್ನು ಲೆಕ್ಕಿಸದೇ ನೆರೆದಿದ್ದವರಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ಇದನ್ನೂ ಓದಿ:ಮಗನನ್ನು ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ: ಸಿದ್ದರಾಮಯ್ಯ

ಈ ವೇಳೆ ಕಾರು ನಿಲ್ಲಿಸಿ ನೆರೆದವರತ್ತ ಸಿದ್ದರಾಮಯ್ಯ ಕೈ ಬೀಸಿದರು. ಆಗ ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಅಲ್ಲಿದ್ದವರು ಒತ್ತಾಯಿಸಿದರು. ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಜಯಘೋಷದ ನಡುವೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಯೂ ಕೇಳಿಬಂದಿತು.

ಸಿದ್ದರಾಮಯ್ಯ ಅವರೊಂದಿಗೆ ಪಕ್ಷದ ಸ್ಥಳೀಯ ಮುಖಂಡರು ಜೊತೆಗೆ ಇದ್ದರು. ಬೆಂಬಲಿಗರತ್ತ ಕೈ ಬೀಸುತ್ತಾ ಸಿದ್ದರಾಮಯ್ಯ ಬಾದಾಮಿ ಪಟ್ಟಣದತ್ತ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.