ನವದೆಹಲಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಕೇಂದ್ರ ಕಾರ್ಮಿಕ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಬೈರತಿ ಸುರೇಶ್ ಕಾರಣ ಎಂದು ಶೋಭಾ ಆರೋಪಿಸಿದ್ದಾರೆ.

‘ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆಯಾಗಲಿ’ ಎಂದು ಸುರೇಶ್ ಭಾನುವಾರ ಆಗ್ರಹಿಸಿದ್ದರು. ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶೋಭಾ, ‘ಬೈರತಿ ಸುರೇಶ್ ದರೋಡೆಕೋರ. ಅವರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಸುಟ್ಟು ಹಾಕಿದ್ದಾರೆ’ ಎಂದು ಆರೋಪಿಸಿದರು.

’ಇಂತಹ ವ್ಯಕ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿರ ಇಟ್ಟುಕೊಂಡಿರುವುದು ಏಕೆ’ ಎಂದು ಕೇಳಿದರು.

‘ರಾಜಕಾರಣಿಗಳು ಮಹಾಭಾರತವನ್ನು ಓದಬೇಕು. ಕೌರವರನ್ನು ಉದ್ಧಾರ ಮಾಡಲು ಶಕುನಿ, ಅವರ ಜತೆಗೆ ಸೇರಿಕೊಂಡಿರಲಿಲ್ಲ. ಅವರನ್ನು ಮುಗಿಸಲು ಸೇರಿಕೊಂಡಿದ್ದ. ಅಂತಹ ಶಕುನಿಗಳು ಈಗಲೂ ಇದ್ದಾರೆ. ಅವರು ಮುಖ್ಯಮಂತ್ರಿಯ ಹಿಂದೆ ಮುಂದೆ ಸುತ್ತುತ್ತಿರುತ್ತಾರೆ. ಸಿದ್ದರಾಮಯ್ಯ ಆಸ್ತಿ ಹೊಡೆಯಲು, ಅವರ ದುಡ್ಡು ಹೊಡೆಯಲು ಬೈರತಿ ಮುಂದಾಗಿದ್ದಾರೆ’ ಎಂದರು.

‘ರಾಜಕಾರಣಿಗಳು ಕ್ಷುಲ್ಲಕ ರಾಜಕಾರಣ ಮಾಡಬಾರದು. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಬೈರತಿ ಸುರೇಶ್ ಕಾರಣ ಎಂದು ಜನ ಹೇಳುತ್ತಿದ್ದಾರೆ. ಅದನ್ನು ಅವರು ಒಪ್ಪಿಕೊಳ್ಳುತ್ತಾರಾ’ ಎಂದು ಅವರು ಪ್ರಶ್ನಿಸಿದರು.

‘ನಿಮ್ಮನ್ನು ಹೆಬ್ಬಾಳದಿಂದ ಓಡಿಸುವ ಜವಾಬ್ದಾರಿ ನಮ್ಮದಾಗಿದೆ. ಕ್ಷೇತ್ರದಲ್ಲಿ ದರೋಡೆ ನಡೆಯುತ್ತಿದೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ನೀವು ನಗರಾಭಿವೃದ್ಧಿ ಸಚಿವರು. ಬೆಂಗಳೂರು ಮುಳುಗುತ್ತಿದೆ. ಯಾವ ಅಭಿವೃದ್ಧಿ ಕೆಲಸ ಮಾಡಿದ್ದೀರಿ’ ಎಂದು ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.