ಬೆಂಗಳೂರು: ‘ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಶುಕ್ರವಾರ ಮಾತನಾಡಿದ ಅವರು, ‘ಮೈಸೂರು, ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ರಾಜ್ಯ ರಾಜಕಾರಣ ಬಿಟ್ಟು ಎಲ್ಲಿಯೂ ಹೋಗದಿರಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದರು.

‘ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಹಾಗೂ ಸ್ಥಾನ ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಈ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಜತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ’ ಎಂದು ಹೇಳಿದರು.

‘ಶಾಸಕಾಂಗ ಪಕ್ಷದ ಸಭೆಗೆ ಹಾಜರಾ ಗದ ನಾಲ್ವರು ಶಾಸಕರಿಗೆ ನೋಟಿಸ್ ನೀಡಿದ್ದು, ಅವರು ವಿವರಣೆ ನೀಡಿದ್ದಾರೆ. ಖುದ್ದು ಭೇಟಿಯಾಗುವಂತೆ ಮತ್ತೊಮ್ಮೆ ನೋಟಿಸ್ ನೀಡಲಾಗಿದೆ. ಅವರೆಲ್ಲ ಭೇಟಿ ಮಾಡುವ ನಿರೀಕ್ಷೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.