ಬೆಂಗಳೂರು: ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಈಗ ಉದ್ಭವಿಸಿರುವ ವಿವಾದಗಳಿಗೆ ತೆರೆ ಎಳೆಯಲು ಉಸ್ತುವಾರಿ ಮತ್ತು ಸಲಹಾ ಸಮಿತಿಗಳನ್ನು ನೇಮಿಸಲಾಗಿದೆ ಎಂದು ಮುಖ್ಯ
ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಮಠಾಧೀಶರು, ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ನಾರಾಯಣ ಗುರು ಮಹಾಸಂಸ್ಥಾನದ ರೇಣುಕಾನಂದ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿದನಿಯೋಗ, ಸಿಗಂದೂರು ಚೌಡೇಶ್ವರಿ ಟ್ರಸ್ಟ್ ಮೂಲಕವೇ ದೇವಸ್ಥಾನದ ಆಡಳಿತ ನಿರ್ವ
ಹಣೆ ಮುಂದುವರಿಸಲು ಆದೇಶಹೊರಡಿಸಬೇಕು ಎಂದು ಒತ್ತಾಯಿಸಿದರು. ದೇವಸ್ಥಾನದ ದೈನಂದಿನವ್ಯವಹಾರದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸುವುದಿಲ್ಲ. ರಾಮಪ್ಪ ನೇತೃತ್ವದಲ್ಲೇ ದೈನಂದಿನ ನಿರ್ವಹಣೆ ನಡೆಯಲಿದೆ. ಸಾರ್ವಜನಿಕರಿಂದ ಸಂಗ್ರಹವಾಗುವ ದೇಣಿಗೆ, ಕಾಣಿಕೆಯ ಬಳಕೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಭಕ್ತರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಲಹಾ ಸಮಿತಿ ಮೇಲುಸ್ತುವಾರಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಬಂಜಾರ ಸಮುದಾಯದ ಸೇವಾಲಾಲ್ ಸ್ವಾಮೀಜಿ, ತಿಗಳ ಸಮುದಾಯದ ಲಕ್ಷ್ಮಿನರಸಿಂಹ ಸ್ವಾಮೀಜಿ, ಚಿತ್ರದುರ್ಗ ಮೇದಾರ ಪೀಠದ ಬಸವ
ಛಲವಾದಿ ಸ್ವಾಮೀಜಿ ಸೇರಿದಂತೆ 21 ಮಠಾಧೀಶರು ಮತ್ತು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಗುವಳ್ಳಿ ಸತೀಶ್ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.