ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಕ್ಷೇತ್ರದ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಭಾವನೆ ಬರುವ ಆಡಿಯೊ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿದ್ದರೂ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನೂತನ ಶಾಸಕ ಭೀಮಣ್ಣ ನಾಯ್ಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಆಡಿಯೋ, ವಿಡಿಯೋಗಳಿಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯ ಮೂಲಕ ಅವರು ಎಚ್ಚರಿಕೆ ನೀಡಿದ್ದಾರೆ. ನಾನು ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಪ್ರತಿನಿಧಿ. ಕಾರಣ ಕ್ಷೇತ್ರದ ಪ್ರತಿಯೊಬ್ಬ ಮತದಾರರು ನನಗೆ ಒಂದೇ. ಉತ್ತಮ ಆಡಳಿತ ನಡೆಸಲು ನನ್ನ ಸರ್ವ ಮತದಾರ ಬಾಂಧವರು ಸಹಕರಿಸಬೇಕು. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಕಿಡಿಗೇಡಿಗಳಿಗೆ ಪಾಠ ಕಲಿಸಲಾಗುವುದು ಎಂದು ತಿಳಿಸಿದ್ದಾರೆ

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ನ ಭೀಮಣ್ಣ ನಾಯ್ಕ ಮೊದಲ ಬಾರಿಗೆ ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.