ಬೆಂಗಳೂರು: ಸಿ.ಡಿ.ಯಲ್ಲಿರುವ ವಿಡಿಯೊ ಮೂಲದ ಬಗ್ಗೆ ಸಂತ್ರಸ್ತ ಯುವತಿ ತನಿಖಾಧಿಕಾರಿಗೆ ವಿವರ ನೀಡಿದ್ದಾರೆ. ತಾನೇ ವಿಡಿಯೊ ಚಿತ್ರೀಕರಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಬುಧವಾರ ತನಿಖಾಧಿಕಾರಿ ಎಂ.ಸಿ. ಕವಿತಾ ವಿಚಾರಣೆ ನೀಡಿದ್ದು, 'ಸಿ.ಡಿ.ಯಲ್ಲಿರುವ ವಿಡಿಯೊ ಅಸಲಿ. ನನಗೆ ಕೆಲಸ ಕೊಡಿಸಲಾಗದು ಎಂದಿದ್ದ ರಮೇಶ ಜಾರಕಿಹೊಳಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಅದರಿಂದ ತುಂಬಾ ನೋವಾಗಿತ್ತು. ಅದಕ್ಕೆ ನಾನೇ, ಇಬ್ಬರು ಸೇರುವ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದೆ. ಮೂಲ ದೃಶ್ಯವನ್ನೂ ನಿಮಗೆ ನೀಡುತ್ತೇನೆ' ಎಂದು ಯುವತಿ, ತನಿಖಾಧಿಕಾರಿಗೆ ಹೇಳಿರುವುದಾಗಿ ಗೊತ್ತಾಗಿದೆ.

'ಎಂಜಿನಿಯರಿಂಗ್ ಮುಗಿಸಿದ್ದೇನೆಂದು ತಿಳಿದುಕೊಂಡು ಕೆಲಸ ಕೊಡಿಸುವ ಭರವಸೆ ನೀಡಿದ್ದರು. ನಂತರ, ತಾವು ಹೇಳಿದಂತೆ ಸಹಕರಿಸುವಂತೆ ಹೇಳಿದ್ದರು. ಸಚಿವರಾಗಿದ್ದರಿಂದ ಕೆಲಸ ಸಿಗಬಹುದೆಂಬ ಆಸೆಯಿಂದ ಅವರು ಹೇಳಿದ್ದಕ್ಕೆಲ್ಲ ಒಪ್ಪಿದೆ. ಲೈಂಗಿಕವಾಗಿ ನನ್ನನ್ನು ಬಳಸಿಕೊಂಡರು' ಎಂದೂ ಸಂತ್ರಸ್ತೆ ತಿಳಿಸಿದ್ದಾರೆ.

ಇದನ್ನೂ ಓದಿ– ಯುವತಿಯ ವೈದ್ಯಕೀಯ ಪರೀಕ್ಷೆ: ಕೊಟ್ಟ ದೂರಿಗೆ ಬದ್ಧ -ಸಂತ್ರಸ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.