ಬೆಂಗಳೂರು: ರಾಜ್ಯದ 833 ವಸತಿ ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.

ಮೊರಾರ್ಜಿ, ಕಿತ್ತೂರುರಾಣಿ ಚನ್ನಮ್ಮ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಕ್ಕಳಿಗೂ ಆಧುನಿಕ ಶಿಕ್ಷಣದ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಪ್ರತಿ ವಸತಿ ಶಾಲೆಯಲ್ಲೂ ಕನಿಷ್ಠ ಒಂದು ಕೊಠಡಿಯನ್ನು ಸ್ಮಾರ್ಟ್ ತರಗತಿಗೆ ಸಜ್ಜುಗೊಳಿಸಲಾಗುವುದು. ವಿಡಿಯೊ, ಆನ್ಲೈನ್ ಆಧಾರಿತ ಪ್ರಾತ್ಯಕ್ಷಿಕೆಗಳ ಮೂಲಕ ಪಾಠಗಳನ್ನು ಕಲಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳನ್ನು ಅರ್ಹ ಬಡವರಿಗೆ ತಲುಪುವಂತೆ ಅಧಿಕಾರಿಗಳು ನಿಗಾವಹಿಸಬೇಕು. ಪರಿಶಿಷ್ಟ ವರ್ಗಗಳ ಬಡವರ ಬದುಕು ಹಸನಾಗಿಸಲು ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.