ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮತ್ತೆ 20 ವಸತಿ ಶಾಲೆ ಸ್ಥಾಪಿಸಲು ಮುಂದಾದ ಸಮಾಜಕಲ್ಯಾಣ ಇಲಾಖೆ

Published : 5 ಅಕ್ಟೋಬರ್ 2024, 19:22 IST
Last Updated : 5 ಅಕ್ಟೋಬರ್ 2024, 19:22 IST
ಫಾಲೋ ಮಾಡಿ
Comments

ಬೆಂಗಳೂರು: ಹೋಬಳಿ ಹಂತದಲ್ಲಿ ಇನ್ನೂ 20 ವಸತಿ ಶಾಲೆಗಳನ್ನು ಸ್ಥಾಪಿಸಲು ಸಮಾಜಕಲ್ಯಾಣ ಇಲಾಖೆ ಮುಂದಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಇಲಾಖೆ, ಗ್ರಾಮೀಣ ಭಾಗದ ಪೋಷಕರಿಂದ ವಸತಿ ಶಾಲೆಗಳಿಗೆ ಸಾಕಷ್ಟು ಬೇಡಿಕೆ ಬಂದಿವೆ. ಹೋಬಳಿ ಕೇಂದ್ರಗಳಲ್ಲಿ ವಸತಿ ಶಾಲೆಗಳ ಅಗತ್ಯವನ್ನು ಸರ್ಕಾರ ಮನಗಂಡಿದೆ. ಮೊದಲ ಹಂತದಲ್ಲಿ 20 ಹೋಬಳಿಗಳಲ್ಲಿ  ವಸತಿ ಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಸ್ಥಳ ಆಯ್ಕೆ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ ಎಂದು ಹೇಳಿದೆ.

ಬೇಡಿಕೆಗೆ ತಕ್ಕಂತೆ ಇನ್ನಷ್ಟು ವಸತಿ ಶಾಲೆಗಳನ್ನು ಸ್ಥಾಪಿಸುವುದಾಗಿ 2024ರ ಬಜೆಟ್‌ನಲ್ಲೂ ಘೋಷಿಸಲಾಗಿತ್ತು. ಈಗ ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ ಮತ್ತು ಕೊಡಗಿನಲ್ಲಿ  ಶಾಲೆಗಳನ್ನು ಆರಂಭಿಸಲು ಸಮ್ಮತಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT