ನವದೆಹಲಿ: 500 ಮೆಗಾವಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್ ಅನ್ನು ಕಲಬುರಗಿಯಿಂದ ಬೀದರ್ಗೆ ಸ್ಥಳಾಂತರಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಸ್ತಾವ ಸಲ್ಲಿಸಿದೆ.

ರಾಜ್ಯಸಭೆಯಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್, ‘ಸ್ಥಳಾಂತರದ ನಿರ್ಬಂಧಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಈ ಪ್ರಸ್ತಾವ ಸಲ್ಲಿಸಿದೆ’ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿತ್ತು. ಅದಕ್ಕೆ ಕೇಂದ್ರ ಸರ್ಕಾರವು 2021ರ ಏಪ್ರಿಲ್ 26ರಂದು ಒಪ್ಪಿಗೆ ನೀಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಬೀದರ್ ಹಾಗೂ ಹೊಸಪೇಟೆ ನಗರಗಳನ್ನು ಸೋಲಾರ್ ನಗರಗಳನ್ನಾಗಿ ಅಭಿವೃದ್ಧಿಪಡಿಸಲು ಕರ್ನಾಟಕ ಸರ್ಕಾರ ಗುರುತಿಸಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಒಂದು ನಗರವನ್ನು ಸೌರ ನಗರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರಗಳಿಗೆ ಹೊಸ ಹಾಗೂ ನವೀಕರಿಸಬಹುದಾದ ಸಚಿವಾಲಯವು ವಿನಂತಿಸಿದೆ. ನಗರಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಸಲ್ಲಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. 27 ರಾಜ್ಯಗಳ ಸರ್ಕಾರಗಳು ಸೌರ ನಗರಗಳನ್ನು ಗುರುತಿಸಿವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.