ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಮಾಲೋಚನೆ ನಡೆಸಿದರು.

ಗುರುವಾರ ಇಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ ಸೋಮಣ್ಣ ಅವರು ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಪಕ್ಷಾಂತರದ ಪರಿಣಾಮಗಳ ಬಗ್ಗೆಯೂ ಶಾ ಮಾಹಿತಿ ಪಡೆದರು. ‘ಮೂರು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಬೇಕು. ಉಪಚುನಾವಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಎದುರಿಸಬೇಕು’ ಎಂದು ಶಾ ಸೂಚಿಸಿದರು.

‘ಮಹಾರಾಷ್ಟ್ರದಲ್ಲಿ ಲಿಂಗಾಯತ ಸಮುದಾಯದವರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಈ ಮತಗಳನ್ನು ಸೆಳೆಯಲು ರಣತಂತ್ರ ರೂಪಿಸಬೇಕು. ಮಹಾರಾಷ್ಟ್ರ ಚುನಾವಣೆಯ ಪ್ರಚಾರಕ್ಕೆ ಹೆಚ್ಚು ದಿನ ಮೀಸಲಿಡಬೇಕು’ ಎಂದು ಸೋಮಣ್ಣ ಅವರಿಗೆ ಶಾ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.