ಬೆಂಗಳೂರು: ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಪ್ರಿಯಾಂಕಾ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಜೊತೆ ಮೈಸೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದರು. ಪ್ರಿಯಾಂಕಾ ಅವರು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ಅವರು, ಬುಧವಾರ ವಯನಾಡ್ಗೆ ತೆರಳಲಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಬಂದ ಇಬ್ಬರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರಮಾಡಿಕೊಂಡರು.

ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೃಷ್ಣಮೂರ್ತಿ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಕಾಂಗ್ರೆಸ್ನ ಹಲವು ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.