ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ.

ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಸೌಮ್ಯಾ ರೆಡ್ಡಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ.

2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಚುನಾಯಿತರಾಗಿದ್ದ ಸೌಮ್ಯಾ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅವರು ಪರಾಭವ ಹೊಂದಿದ್ದರು.

ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯಾ ರೆಡ್ಡಿ, ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ, ಕೃಪಾ ಆಳ್ವ ಮತ್ತು ಐಶ್ವರ್ಯಾ ಮಹದೇವ್ ಅವರ ಹೆಸರು ಮುಂಚೂಣಿಯಲ್ಲಿದ್ದವು.

ಹಾಲಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ಅವಧಿ ಲೋಕಸಭೆ ಚುನಾವಣೆಗೆ ಮೊದಲೇ ಮುಗಿದಿತ್ತು. ಅಲ್ಲದೆ, ಸದ್ಯ ಅವರು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷೆ. ಹೀಗಾಗಿ, ಒಬ್ಬರಿಗೆ ಒಂದೇ ಹುದ್ದೆ ಎಂಬ ನೀತಿಯಡಿ ಅವರು ಈ ಸ್ಥಾನವನ್ನು ತೆರವುಗೊಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.