ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷರ ಪೀಠದ ಬಳಿ ಕಾಂಗ್ರೆಸ್ನ ಕೆಲವು ನಾಯಕರು ಫೋಟೊ ತೆಗೆಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪೀಠದಲ್ಲಿದ್ದಾಗಲೇ, ಮಂಗಳೂರು ಕಾಂಗ್ರೆಸ್ನ ನಾಯಕರು ಅಲ್ಲಿ ನಿಂತು ಚಿತ್ರ ತೆಗೆಸಿಕೊಂಡಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿಜೆಪಿ ರಾಜ್ಯ ಘಟಕ, ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.

‘ಸ್ಪೀಕರ್ ಹುದ್ದೆ ಅತ್ಯಂತ ಪವಿತ್ರ ಹಾಗೂ ಘನತೆ ಇರುವಂತಹದ್ದು. ಸ್ಪೀಕರ್ ಹುದ್ದೆ ಅಲಂಕರಿಸಿದವರು ರಾಜಕೀಯದಿಂದ ಗಾವುದ ದೂರದಲ್ಲಿರಬೇಕು ಎಂಬುದು ಅಲಿಖಿತ ನಿಯಮ. ಆದರೆ ಸ್ಪೀಕರ್ ಹುದ್ದೆ ಅಲಂಕರಿಸಿರುವ ಯು.ಟಿ. ಖಾದರ್ ಅವರು ಸದನದ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ತಮ್ಮ ಪೀಠದ ಬಳಿ ತಮ್ಮ ರಾಜಕೀಯ ಆಪ್ತೇಷ್ಟರ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ತಿಳಿಸಬೇಕು’ ಎಂದು ಬಿಜೆಪಿ ಪ್ರಶ್ನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.