ಬೆಂಗಳೂರು: ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ಜಾಹೀರಾತು ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಈ ನಿಯಮ ಅನ್ವಯಿಸಲಿದ್ದು, ಪತ್ರಿಕೆಗಳ ಸಂಪಾದಕರು, ಮಾಲೀಕರು ಆರ್ಎನ್ಐ ಪ್ರಮಾಣಪತ್ರ, ಘೋಷಣಾ ಪತ್ರ, ಜಾತಿ, ಆದಾಯ ಪ್ರಮಾಣಪತ್ರ, ಐದು ವರ್ಷಗಳಲ್ಲಿ ಆರ್ಎನ್ಐಗೆ ಸಲ್ಲಿಸಿರುವ ವಾರ್ಷಿಕ ವರದಿ, ಐದು ವರ್ಷಗಳ ಪತ್ರಿಕಾ ಪ್ರಕಟಣೆಯ ಹಾಜರಾತಿ ವರದಿ, ಒಂದು ತಿಂಗಳ ಪತ್ರಿಕಾ ಸಂಚಿಕೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಈಗಾಗಲೇ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮಾಲೀಕತ್ವದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ರೂಪದ ಜಾಹೀರಾತು ನೀಡಲಾಗುತ್ತಿದ್ದು, ಇದೇ ಮೊದಲ ಬಾರಿ ಒಂದು ನಿರ್ದಿಷ್ಟ ಜಾತಿಯ ಮಾಲೀಕತ್ವದ ಪತ್ರಿಕೆಗಳಿಗೆ ಜಾಹೀರಾತು ನೀಡಲು ಸುತ್ತೋಲೆ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.