ನವದೆಹಲಿ: ಶಿರಾ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ, ಕುಡಿಯುವ ನೀರು ಯೋಜನೆಗೆ ಹಾಗೂ ನರೇಗಾ ಯೋಜನೆಯಡಿ ವಿಶೇಷ ಅನುದಾನ ನೀಡುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಕ್ಷೇತ್ರದ ಗ್ರಾಮೀಣ ರಸ್ತೆಗಳು ಹಾಳಾಗಿದ್ದು ಹಳ್ಳಿಯಿಂದ ಹೋಬಳಿ ಸಂಪರ್ಕಿಸುವ ಹಾಗೂ ಹೋಬಳಿಗಳಿಂದ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕಿಸುವ ರಸ್ತೆಗಳು ಹದಗೆಟ್ಟಿವೆ.
ಹೀಗಾಗಿ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹200 ಕೋಟಿ ಒದಗಿಸಬೇಕೆಂದು ಮನವಿ ಮಾಡಿದರು.

‘ಕೇಂದ್ರ ಸಚಿವರು ತಮ್ಮ ಎಲ್ಲ ಪ್ರಸ್ತಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹಂತ ಹಂತವಾಗಿ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ’ ಎಂದು ಜಯಚಂದ್ರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.