ಬೆಂಗಳೂರು: ಎಸ್‌ಎಸ್‌ಎಲ್‌ಸಿಯ ತಲಾ 60 ಬಾಲಕ–ಬಾಲಕಿಯರನ್ನು ಆಯ್ಕೆ ಮಾಡಿಕೊಂಡು ಒಟ್ಟು 120 ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ಶಾಸಕ ಪ್ರದೀಪ್ ಈಶ್ವರ್ ನಿರ್ಧರಿಸಿದ್ದಾರೆ.

ಚಿಕ್ಕಬಳ್ಳಾಪುರ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಗಣನೀಯವಾಗಿ ಕಡಿಮೆಯಾಗುತ್ತಿದೆ. ಉತ್ತಮ ಫಲಿತಾಂಶ ಬರುವಂತೆ ಮಾಡಲು ‘ಸೂಪರ್–60’ ಯೋಜನೆ ಅಡಿ ಆಯ್ಕೆಯಾದ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ಮೂರು ತಿಂಗಳ ತರಬೇತಿ ನೀಡಲಾಗುವುದು. ಆ ಮೂಲಕ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ‘ಟಾಪ್–10’ ಒಳಗೆ ತರುವ ಗುರಿ ಹೊಂದಲಾಗಿದೆ ಎಂದು ಪ್ರದೀಪ್ ಈಶ್ವರ್ ಮಾಹಿತಿ ನೀಡಿದರು.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಯರನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಈಗಾಗಲೇ ಚಿಕ್ಕಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ 27 ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಸಿದ್ದಾರೆ. ಈ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಬಡವರು, ಅನಾಥರು, ಏಕ ಪೋಷಕರನ್ನು ಹೊಂದಿರುವ ಮಕ್ಕಳಿಗೆ ಆದ್ಯತೆ ನೀಡಿ 120 ವಿದ್ಯಾರ್ಥಿ–ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗಿದೆ. ಅವರ ಪೋಷಕರು, ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣ ಇಲಾಖೆ ಅನುಮತಿ ಪಡೆದು ಮೂರು ತಿಂಗಳು ಅವರಿಗೆ ಬೆಂಗಳೂರಿನಲ್ಲಿ ವಾಸ್ತವ್ಯ ಕಲ್ಪಿಸಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.