ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪೂರ್ಣ ಕಾಮಗಾರಿಯಿಂದ ಶ್ರೀರಾಮ ಮಂದಿರ ಸೋರಿಕೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Published 4 ಜುಲೈ 2024, 11:17 IST
Last Updated 4 ಜುಲೈ 2024, 11:17 IST
ಅಕ್ಷರ ಗಾತ್ರ

ವಿಜಯಪುರ: ‘ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಇನ್ನೂ ಪೂರ್ಣವಾಗಿರದ ಕಾರಣಕ್ಕೆ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ, ಇನ್ನೊಂದು ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ’ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪ್ರತಿ ಪಕ್ಷಗಳ ಮೋಸ, ಆಸೆ, ಆಮಿಷದಿಂದಾಗಿ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಾಗಿದೆಯೇ ಹೊರತು, ಇದನ್ನು ಹಿಂದುಗಳಿಗೆ ಹಿನ್ನೆಡೆ ಎಂದು ವಿಶ್ಲೇಷಿಸುವುದು ಸರಿಯಲ್ಲ’ ಎಂದು ಸ್ಪಷ್ಟಪಡಿಸಿದರು.

‘ಅಯೋಧ್ಯೆಯಲ್ಲಿ ಬಡತನ ಹೆಚ್ಚಿರುವುದರಿಂದ ಮತದಾರರು ಆಸೆ, ಆಮಿಷಕ್ಕೆ ಒಳಗಾಗಿ ಮತ ಚಲಾಯಿಸಿದ್ದಾರೆ. ಇದು ಹಿಂದುಗಳ ಧಾರ್ಮಿಕ ನಂಬಿಕೆಗೆ ಹೊಡೆತ ಎಂದು ಭಾವಿಸಬಾರದು’ ಎಂದರು.

‘ತಮ್ಮನ್ನು ತಾವು ಹಿಂದುಗಳೆಂದು ಕರೆದುಕೊಳ್ಳುವವರು ಹಿಂಸಾಚಾರ, ದ್ವೇಷದಲ್ಲಿ ಹಗಲಿರುಳು ನಿರತವಾಗಿದ್ದಾರೆ’ ಎಂಬ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀಗಳು, ‘ಸಹಿಷ್ಣುಗಳಾದ ಹಿಂದುಗಳನ್ನು ಕೆಣಕಬೇಕು, ಒಂದಷ್ಟು ಗೊಂದಲ ಸೃಷ್ಟಿಸಬೇಕು, ತಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ರಾಜಕೀಯ ನಾಯಕರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT