ಬೆಂಗಳೂರು: ಜೂನ್ 21ರಿಂದ 28ರವರೆಗೆ ನಡೆದಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 42.47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 1,92,181 ಮಂದಿಯ ಪೈಕಿ 81,614 ಮಂದಿ ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ 40.95, ಅನುದಾನಿತ ಶಾಲೆಗಳಲ್ಲಿ ಶೇ 42.27 ಹಾಗೂ ಅನುದಾನರಹಿತ ಶಾಲೆಗಳಲ್ಲಿ ಶೇ 44.96 ಫಲಿತಾಂಶ ದಾಖಲಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 41.63 ಇದ್ದರೆ, ಗ್ರಾಮೀಣ ಪ್ರದೇಶದ ಉತ್ತೀರ್ಣ ಪ್ರಮಾಣ ಶೇ 43.34ರಷ್ಟು ಇದೆ. ಕಳೆದ ವರ್ಷ ಶೇ 40.69ರಷ್ಟು ಫಲಿತಾಂಶ ದಾಖಲಾಗಿತ್ತು.

ವಿದ್ಯಾರ್ಥಿಗಳು http://kseeb.karnataka.gov.in/results ಅಥವಾ http://karresults.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ನೋಡಬಹುದು ಮತ್ತು ಕರಡು ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸ್ಕ್ಯಾನ್ ಪ್ರತಿ: ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಾಗಿ ಜುಲೈ 19ರೊಳಗೆ ಅರ್ಜಿ ಸಲ್ಲಿಸಬೇಕು. ಮರುಮೌಲ್ಯಮಾಪಕ್ಕೆ ಜುಲೈ 24ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.