ಬೆಳಗಾವಿ: ದತ್ತು, ಅಡಮಾನ, ಹಸ್ತಾಂತರ ಪ್ರಮಾಣಪತ್ರ, ಒಪ್ಪಂದ ಪತ್ರ, ಸಾಲದ ಕರಾರು ಸೇರಿದಂತೆ 54 ನೋಂದಣಿಯೇತರ ದಾಖಲೆಗಳ ಮೇಲಿನ ಮುದ್ರಾಂಕ ಶುಲ್ಕವನ್ನು ಹಲವು ಪಟ್ಟುಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ಮಸೂದೆ–2023’ ಅನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಸೂದೆಯನ್ನು ಸದನದಲ್ಲಿ ಮಂಡಿಸಿದರು.

ವಿವಾಹ ವಿಚ್ಛೇದನ ಪ್ರಮಾಣಪತ್ರ, ವಿಭಾಗ ಪತ್ರ, ಬಾಂಡ್, ಗುತ್ತಿಗೆ ಒಪ್ಪಂದ ಸಹ ಈ ಮಸೂದೆ ವ್ಯಾಪ್ತಿಯಲ್ಲಿವೆ. ಕಂಪನಿ ಆರಂಭಕ್ಕೆ ಸಂಬಂಧಿಸಿದ ಒಪ್ಪಂದ, ಚಿಟ್ ಫಂಡ್ ಒಪ್ಪಂದ, ವಕೀಲರ ಪ್ರಮಾಣಪತ್ರಗಳ ಮುದ್ರಾಂಕ ಶುಲ್ಕವನ್ನು ಹೆಚ್ಚಿಸುವ ಪ್ರಸ್ತಾವವೂ ಈ ಮಸೂದೆಯಲ್ಲಿದೆ.

ಕರ್ನಾಟಕಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಮುದ್ರಾಂಕ ಶುಲ್ಕದ ಪ್ರಮಾಣ ಜಾಸ್ತಿ ಇದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಮುದ್ರಾಂಕ ಶುಲ್ಕ ಹೆಚ್ಚಳ ಮಾಡಬೇಕು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಪ್ರಸ್ತಾವ ಸಲ್ಲಿಸಿತ್ತು. ಅದರ ಆಧಾರದಲ್ಲಿ ಈ ತಿದ್ದುಪಡಿ ಮಸೂದೆಯನ್ನು ರೂಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.