ಮುಖ್ಯಮಂತ್ರಿ ಹುದ್ದೆಯ ಅವಧಿಯನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಹಂಚಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಆಗಾಗ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಲೇ ಇದೆ. ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಹಲವು ಬಾರಿ ಈ ವಿಚಾರ ಮಾರ್ದನಿಸಿತು. ಜಾತಿವಾರು ಪ್ರಾತಿನಿಧ್ಯ ಆಧಾರದಲ್ಲಿ ಹೆಚ್ಚು ಮಂದಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಬೇಡಿಕೆ ಕೆಲವು ಸಚಿವರಿಂದ ಆಗಾಗ ಕೇಳಿಬರುತ್ತಿದೆ. ‘ಆಪರೇಷನ್ ಕಮಲ’ದ ಮೂಲಕ ಬಿಜೆಪಿ ನಾಯಕರು ‘ಕೈ’ ಸರ್ಕಾರದ ಬುಡ ಅಲ್ಲಾಡಿಸುವ ಪ್ರಯತ್ನಕ್ಕೆ ಕೈ ಹಾಕಬಹುದು ಎಂಬ ಮಾತೂ ಚಾಲ್ತಿಯಲ್ಲಿದೆ.
ಬೆಂಬಿಡದ ‘ಕಮಿಷನ್’ ಭೂತ!
ಬಿಜೆಪಿ ನೇತೃತ್ವದ ಸರ್ಕಾರ ಹಿಂದೆ ಇದ್ದಾಗ ಶೇಕಡ 40ರಷ್ಟು ಕಮಿಷನ್ ಆರೋಪ ಜೋರಾಗಿ ಸದ್ದು ಮಾಡಿತ್ತು. ಕೈ ಸರ್ಕಾರವನ್ನೂ ಈ ‘ಕಮಿಷನ್’ ಭೂತ ಬಿಟ್ಟಿಲ್ಲ. ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಭಾರಿ ಮೊತ್ತದ ಕಮಿಷನ್‌ಗೆ ಬೇಡಿಕೆ ಇಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಲೇ ಇದೆ.