ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರವನ್ನು ಮೂಲವೇತನದ ಶೇ 6.50 ರಿಂದ ಶೇ 11.25ಕ್ಕೆ ಹೆಚ್ಚಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ 2019ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ 4.75ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಹಾಲಿ ಲಭ್ಯವಿರುವ ತುಟ್ಟಿಭತ್ಯೆ ದರವನ್ನು ಮೂಲ ನಿವೃತ್ತಿ ವೇತನದ ಶೇ 6.50 ರಿಂದ ಶೇ 11.25ಕ್ಕೆ ಹೆಚ್ಚಿಸಲಾಗಿದೆ.

2006ರ ಪರಿಷ್ಕೃತ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ಹಾಗೂ 01.01.2016ರ ಪೂರ್ವದಲ್ಲಿ ನಿವೃತ್ತರಾದ ಪಿಂಚಣಿದಾರರಿಗೆ ಈ ಆದೇಶ ಅನ್ವಯಿಸುತ್ತದೆ. ಉಳಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸುವುದಾಗಿ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.