ಬೆಂಗಳೂರು: ಪ್ರತಿ ವಾರ ಸಾವಿರಾರು ಸಂಖ್ಯೆಯಲ್ಲಿ ಬರುವ ಚಾರಣಿಗರು ಪಶ್ಚಿಮ ಘಟ್ಟದ ಪ್ರದೇಶ, ಅರಣ್ಯದ ಗಿರಿ ಪ್ರದೇಶಗಳು, ಜಲಮೂಲಗಳಿಗೆ ಹಾನಿ ಮತ್ತು ಮಾಲಿನ್ಯ ಮಾಡುತ್ತಿರುವುದರಿಂದ ಚಾರಣ ಪಥಗಳಿಗೆ ನಿರ್ಬಂಧ ವಿಧಿಸುವಂತೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋಇಚ್ಛೆ ಪ್ಲಾಸ್ಟಿಕ್, ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥಗಳನ್ನು ಚಾರಣಿಗರು ಎಸೆಯುತ್ತಿದ್ದಾರೆ. ಇದರಿಂದ ವನ್ಯಜೀವಿಗಳಿಗೂ ಅಪಾಯ ಉಂಟಾಗುತ್ತಿದೆ. ಅಪಾರ ಸಂಖ್ಯೆಯ ಜನರನ್ನು ನಿಯಂತ್ರಿಸುವುದು ಮತ್ತು ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ಸವಾಲಾಗಿದೆ ಎಂದಿದ್ದಾರೆ.

ಇದೇ 26ರಂದು ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಕಾರಣ ಅರಣ್ಯದೊಳಗೆ ಜನಜಂಗುಳಿ ಆಗಿತ್ತು. ಮುಂದಿನ ದಿನಗಳಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಕೆಲವು ಚಾರಣಿಗರು ಚಾರಣ ವೇಳೆ ಟೆಂಟ್ ಹಾಕಿ ರಾತ್ರಿ ಅರಣ್ಯಗಳಲ್ಲಿಯೇ ಉಳಿಯುತ್ತಿರುವ ವಿಷಯವೂ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳು ಅಂದರೆ ಕುಮಾರ ಪರ್ವತ, ಮೂರು ಕಣ್ಣಿನಗುಡ್ಡ ಸೇರಿ ಎಲ್ಲ ಚಾರಣ ತಾಣಗಳಲ್ಲಿ ಪ್ರಮಾಣಿತ ಕಾರ್ಯ ವಿಧಾನ ರೂಪಿಸುವವರೆಗೆ ಮತ್ತು ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ ಜಾರಿ ಮಾಡುವವರೆಗೆ ತಾತ್ಕಾಲಿಕವಾಗಿ ಚಾರಣಕ್ಕೆ ನಿರ್ಬಂಧ ವಿಧಿಸಬೇಕು ಎಂದು ಖಂಡ್ರೆ ಸೂಚಿಸಿದ್ದಾರೆ.

ಪ್ರಸ್ತುತ ಅರಣ್ಯ ಇಲಾಖೆ ಪರಿಸರ ಪ್ರವಾಸೋದ್ಯಮ ವಿಭಾಗದ ವತಿಯಿಂದ ನಿರ್ವಹಿಸುತ್ತಿರುವ ಚಾರಣ ಪಥಗಳಲ್ಲಿ 150 ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, https://www.karnatakaecotourism.com ನಲ್ಲಿ ಬುಕ್ಕಿಂಗ್‌ಗೆ ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.