ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸೋಮವಾರ ಸುತ್ತೋಲೆ ಹೊರಡಿಸಿದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತೀರ್ಮಾನ ಕೈಗೊಳ್ಳುವರೆಗೆ, ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಯಾವುದೇ ಅಧಿಸೂಚನೆ ಹೊರಡಿಸಬಾರದು ಎಂದು ಅ. 28ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ನಿರ್ಣಯಕ್ಕೆ ಪೂರಕವಾಗಿ ಈ ಆದೇಶ ಹೊರಡಿಸಲಾಗಿದೆ.

ನೇರ ನೇಮಕಾತಿಗೆ ಅ.28ಕ್ಕೂ ಮೊದಲು ಅಧಿಸೂಚನೆ ಹೊರಡಿಸಿದ್ದರೆ ಅಥವಾ ಆಯ್ಕೆ ಪ್ರಕಿಯೆಯನ್ನು ಆರಂಭಿಸಿದ್ದರೆ, ಅಂತಹ ನೇಮಕಾತಿಗಳಿಗೆ ಈ ಸುತ್ತೋಲೆ ಅನ್ವಯಿಸುವುದಿಲ್ಲ. ಅಲ್ಲದೆ, ಎಲ್ಲ ಆಯ್ಕೆ ಪ್ರಾಧಿಕಾರಗಳು, ನೇಮಕಾತಿ ಪ್ರಾಧಿಕಾರಗಳು ಈ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.