ಬೆಂಗಳೂರು: ನಗರದ ಕೆರೆಗಳಿಗೆ ಭಾರಿಪ್ರಮಾಣದಲ್ಲಿ ಒಳಚರಂಡಿ ನೀರು ಹರಿಯುತ್ತಿದ್ದು, ಅದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕುರಿತು ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ‘ಕೆರೆಗಳಿಗೆ ಹರಿದುಬರುವ ಕೊಳಚೆ ನೀರು ಸಂಸ್ಕರಿಸಲು ಸಂಸ್ಕರಣಾ ಘಟಕಗಳನ್ನು ಅಳವಡಿಸ
ಬೇಕು ಮತ್ತು ಆ ನೀರನ್ನು ಇತರ ಉದ್ದೇಶಗಳಿಗೆ ಬಳಸಬೇಕು’ ಎಂದರು.

‘ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ನೊರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಅದಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸಂಸ್ಕರಿಸಿದ ನೀರನ್ನು ಅಕ್ಕಪಕ್ಕದ ತಾಲ್ಲೂಕು ಮತ್ತು ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ಬಳಸಬೇಕು ’ಎಂದು ಅವರು ಹೇಳಿದರು.

ನಗರದ ಕೆಲವು ಕೆರೆಗಳನ್ನು ಖಾಸಗಿಯವರ ಜತೆಗೂಡಿ ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಮಾರಗೊಂಡನಹಳ್ಳಿ ಕೆರೆ, ಶಿಕಾರಿಪಾಳ್ಯ ಕೆರೆ, ಯರಂಡಹಳ್ಳಿ ಕೆರೆ, ಕಮ್ಮಸಂದ್ರ ಕೆರೆಗಳನ್ನು ಖಾಸಗಿಯವರ ನೆರವಿನಿಂದ ಅಭಿವೃದ್ಧಿಪಡಿಸಲಾಗುತ್ತಿದೆಎಂದು ಅಧಿಕಾರಿಗಳು ವಿವರಿಸಿದರು.

ಹೊಸಕೋಟೆ ವ್ಯಾಪ್ತಿಯಲ್ಲಿ ಏಳು ಕರೆಗಳನ್ನು ಅಭಿವೃದ್ಧಿ ಮಾಡಲು ಹೊಸಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಮುಂದೆ ಬಂದಿದ್ದು, ಅದಕ್ಕೆ ಒಪ್ಪಿಗೆ ನೀಡಲಾಗಿದೆ. ಸಂಜೀವಿನಿ ಯೋಜನೆಯಡಿ ಈಗಾಗಲೇ 651 ಕೆರೆಗಳನ್ನು ರಾಜ್ಯದ ವಿವಿಧೆಡೆ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.