ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಕ್ ಲಾಗ್ ಹುದ್ದೆ‌ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಎಚ್‌.ಸಿ. ಮಹದೇವಪ್ಪ

Published 1 ಜುಲೈ 2024, 21:36 IST
Last Updated 1 ಜುಲೈ 2024, 21:36 IST
ಅಕ್ಷರ ಗಾತ್ರ

ಬೆಂಗಳೂರು: ‘ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ ಕುರಿತು ಆಯುಕ್ತರ ಅಧ್ಯಕ್ಷತೆಯಲ್ಲಿ ಸೋಮವಾರ ಅವರು ಪ್ರಗತಿ ಪರಿಶೀಲನೆ ನಡೆಸಿದರು.

‘ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ವಿಳಂಬ ಮಾಡುತ್ತಿರುವ ಮತ್ತು ನಿರ್ಲಕ್ಷ್ಯ ತೋರಿಸುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಬ್ಯಾಕ್ ಲಾಗ್ ಹುದ್ದೆಗಳನ್ನು ಆದ್ಯತೆ ಮೇಲೆ ‌ಭರ್ತಿ ಮಾಡುವಂತೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿಯೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಾಕಿ ಇರುವ 76 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ‘ಬ್ಯಾಕ್‌ಲಾಗ್‌ ನೇಮಕಾತಿಗೆ ವಿನಾಯಿತಿ ನೀಡುವಂತೆ ಹಲವು ನಿಗಮ, ಮಂಡಳಿಗಳು ವಿನಂತಿಸಿವೆ. ಈ ‌ವಿಷಯವನ್ನು ಸಂಪುಟ ಸಭೆಯಲ್ಲಿ ಮಂಡಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT