ಶಿವಮೊಗ್ಗ: ‘ಸಬ್ ಇನ್ಸ್ಪೆಕ್ಟರ್ ಹುದ್ದೆ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂಬ ಸಂಶಯವಿದ್ದರೆ ಅಂತಹ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ನಕಲು ಪಡೆದು ಮೇಲ್ಮನವಿ ಸಲ್ಲಿಸಬಹುದು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪಿಎಸ್ಐ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ನಿರಾಧಾರ. ಕಲಬುರಗಿಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದ ಅಭ್ಯರ್ಥಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಒಂದು ಲಕ್ಷ ಅಭ್ಯರ್ಥಿಗಳು ಪಿಎಸ್ಐ ಪರೀಕ್ಷೆ ಬರೆದಿದ್ದರು. ಆಯ್ಕೆಯಾಗಿದ್ದು 450. ಉಳಿದವರಿಗೆ ಅಸಹನೆ ಸಹಜ. ಆದರೂ ಅನ್ಯಾಯವಾಗಿದ್ದರೆ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.