ಬೆಂಗಳೂರು: ‘ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ– ಕಾರಿಡಾರ್-2 ) ಮತ್ತು ಹೀಲಲಗಿ- ರಾಜಾನುಕುಂಟೆ (46.88 ಕಿ.ಮೀ– ಕಾರಿಡಾರ್-4 ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಉಪನಗರ ರೈಲು ಯೋಜನೆಯ ಒಟ್ಟು ನಾಲ್ಕು ಕಾರಿಡಾರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಿಗದಿತ ಅವಧಿಯ ಒಳಗೆ 2 ಮತ್ತು 4ನೇ ಕಾರಿಡಾರ್ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಬಳಿಕ ಇತರ ಎರಡು ಕಾರಿಡಾರ್‌ಗಳ ಕುರಿತು ಚರ್ಚೆ ನಡೆಸಲಾಗುವುದು’ ಎಂದರು.

‘ಬೆಂಗಳೂರು ಮೆಟ್ರೊ, ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ. ಒಂದಕ್ಕೊಂದು ಸ್ಪರ್ಧೆ ಒಡ್ಡಿಕೊಳ್ಳುವುದರ ಬದಲು, ಎಲ್ಲಿ ಯಾರ ಸೇವೆ ಇಲ್ಲವೊ ಅಲ್ಲಿ ಮತ್ತೊಬ್ಬರು ಸೇವೆ ನೀಡುವಂತೆ ಆಗಬೇಕು. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳನ್ನೂ ಸೇರಿಸಿಕೊಂಡು ಸಮನ್ವಯದ ಸಭೆಗಳನ್ನು ನಡೆಸಬೇಕು. ಪರಸ್ಪರ ಪೂರಕವಾಗಿ ಕೆಲಸ ಮಾಡುವುದರಿಂದ ಅನಗತ್ಯ ವಿಳಂಬವನ್ನು ತಡೆಯಬಹುದು’ ಎಂದು ಸೋಮಣ್ಣ ಸಲಹೆ ನೀಡಿದರು.

ರೈಲ್ವೆ ಬೋಗಿಗಳ ಸಮಸ್ಯೆ:

‘ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ಬೋಗಿಗಳನ್ನು ಉತ್ಪಾದಿಸಿ ಪೂರೈಸಲು ಕೆ-ರೈಡ್ ಟೆಂಡರ್ ಕರೆದಿದ್ದು, ಯಾವ ಸಂಸ್ಥೆಯೂ ಇದರಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ರೈಲ್ವೆಯ ನೆರವು ನೀಡಬೇಕು’ ಎಂಬ ಸಚಿವ ಎಂ.ಬಿ.ಪಾಟೀಲ ಅವರ ಮನವಿಗೆ ಸ್ಪಂದಿಸಿದ ಸೋಮಣ್ಣ, ಶೀಘ್ರದಲ್ಲಿ ದೆಹಲಿಯಲ್ಲಿ ಸಭೆ ಆಯೋಜಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ರೈಲ್ವೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಪರಿಹಾರ ಸೂಚಿಸುವುದಾಗಿಯೂ ಹೇಳಿದರು.

‘2026ರ ಅಂತ್ಯದಲ್ಲಿ ಎರಡೂ ಕಾರಿಡಾರ್ ಕಾಮಗಾರಿ ಮುಗಿಯಲು ಯೋಜನೆ ರೂಪಿಸಿದ್ದು, ಅದಕ್ಕಿಂತ ಕನಿಷ್ಠ ಆರು ತಿಂಗಳು ಮೊದಲು ರೈಲ್ವೆ ಬೋಗಿಗಳ ಸರಬರಾಜು ಆಗಬೇಕಾಗಿದೆ. ಇಲ್ಲದಿದ್ದರೆ ಆ ವೇಳೆಗೆ ರೈಲ್ವೆ ಸಂಚಾರ ಆರಂಭಿಸಲು ಕಷ್ಟ ಆಗುತ್ತದೆ ಎಂದು ಅಧಿಕಾರಿಗಳು ಹೇಳಿದ ನಂತರ ಇದರ ಗಂಭೀರತೆಯನ್ನು ಗಮನಿಸಿ, ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸೋಮಣ್ಣ ನೀಡಿದರು.

‘ಬೆಂಗಳೂರಿನ ನೆರೆಹೊರೆಯ ನಗರ, ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ಉಪನಗರ ರೈಲ್ವೆ ಯೋಜನೆಯ ವಿಸ್ತರಣೆ ಅಗತ್ಯ ಇದೆ. ಬೆಂಗಳೂರಿನಿಂದ ಸಮೀಪದ ತುಮಕೂರು, ಮೈಸೂರು, ಮಾಗಡಿ, ಗೌರಿಬಿದನೂರು, ಕೋಲಾರ ನಗರಗಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಮೊದಲು ಸಭೆಗಳನ್ನು ಮಾಡಿ ನಂತರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು’ ಎಂದು ಸೋಮಣ್ಣ ಹೇಳಿದರು.

ಬೆಂಗಳೂರು- ಯುಲಂಹಕ- ದೇವನಹಳ್ಳಿ ನಡುವೆ ಸಂಪರ್ಕ ಕಲ್ಪಿಸುವ ಕಾರಿಡಾರ್-1 ಉಪನಗರ ರೈಲ್ವೆ ಯೋಜನೆಯನ್ನು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ಸಂಪರ್ಕಿಸುವ ಬದಲು ದೇವನಹಳ್ಳಿಯಿಂದಲೇ ನೇರವಾಗಿ ಕೋಲಾರಕ್ಕೆ ಸಂಪರ್ಕ ಕಲ್ಪಿಸುವ ಸಾಧ್ಯಾಸಾಧ್ಯತೆ ಬಗ್ಗೆಯೂ ಸಭೆಯಲ್ಲಿ ನಡೆಯಿತು. ಅಲ್ಲದೆ, ಉಪನಗರ ರೈಲ್ವೆ ಯೋಜನೆಯನ್ನು ಬೆಂಗಳೂರು ಸುತ್ತಲಿನ ವರ್ತುಲ ರೈಲ್ವೆ ಹಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಇದೊಂದು ಒಳ್ಳೆಯ ಪರಿಕಲ್ಪನೆ ಆಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದೂ ಸೋಮಣ್ಣ ಹೇಳಿದರು.

ಸುಮಾರು ₹ 21 ಸಾವಿರ ಕೋಟಿ ವೆಚ್ಚದ 281 ಕಿ.ಮೀ ವರ್ತುಲ ರೈಲ್ವೆ ಯೋಜನೆಗೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ಉಪನಗರ ರೈಲುಗಳನ್ನೂ ಇದರ ಜತೆ ಸಂಪರ್ಕ ಮಾಡುವುದು ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ, ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕಿ ಎನ್. ಮಂಜುಳಾ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.