ಕಾರವಾರ:ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರನ್ನು ಉಸಿರಾಟದ ಸಮಸ್ಯೆಯ ಚಿಕಿತ್ಸೆಗಾಗಿ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅಂಕೋಲಾ ತಾಲ್ಲೂಕಿನ ಬಡಿಗೇರಿಯಲ್ಲಿರುವ ತಮ್ಮ ನಿವಾಸದಲ್ಲಿದ್ದ ಅವರಿಗೆ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಈ ಮಾಹಿತಿ ಪಡೆದ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ, ಆಸ್ಪತ್ರೆಗೆ ಕರೆದುಕೊಂಡು ಬಂದರು.

‘ಪ್ರಜಾವಾಣಿ’ ಜೊತೆ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶಿವಾನಂದ ಕುಡ್ತರಕರ್, ‘ಸುಕ್ರಜ್ಜಿ ಅವರಿಗೆ ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಮತ್ಯಾವುದೇ ಸಮಸ್ಯೆಗಳಿಲ್ಲ. ಅವರ ಆರೈಕೆ ಬಗ್ಗೆ ಹೆಚ್ಚು ಲಕ್ಷ್ಯ ವಹಿಸುವ ಸಲುವಾಗಿ ಮಾತ್ರ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.