ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಅವರ ಪರವಾಗಿ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮೂವರು ವಕೀಲರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬುಧವಾರ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ವಕೀಲರಾದ ಸುಧೀಶ್ ಮತ್ತು ಲೋಹಿತ್ ಎಂಬುವವರು ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಿದ್ದು, ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರು ವಿಚಾರಣೆಗೆ 29ರಂದು ದಿನಾಂಕ ನಿಗದಿಪಡಿಸಿದ್ದಾರೆ.

ಅದೇ ದಿನ ಪ್ರಕರಣದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದ್ದು, ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಈ ಬಾರಿಯೂ ವಿಡಿಯೊ ಕಾನ್ಫರೆನ್ಸ್ ಮೂಲಕವೇ ಹಾಜರು ಪಡಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.