ಬೆಂಗಳೂರು: ‘ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯ 17 ಗುರಿಗಳ ಸಾಧನೆಯಲ್ಲಿ ದೇಶದಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸಬೇಕಿದೆ’ ಎಂದು ಅಧಿಕಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಯೋಜನಾ ಇಲಾಖೆ ಸಿದ್ಧಪಡಿಸಿ ರುವ ‘ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ –2030’ರ ಕ್ರಿಯಾ ಯೋಜನೆಯನ್ನು ಬುಧವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಮುಂದಿನ 10 ವರ್ಷಗಳ ಅವಧಿಯಲ್ಲಿ ಸುಸ್ಥಿರ ಅಭಿವೃದ್ಧಿ ಪಥದಲ್ಲಿ ರಾಜ್ಯ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಈ ಕ್ರಿಯಾ ಯೋಜನೆ ಒದಗಿಸಲಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಲಿದೆ’ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

‘ರಾಜ್ಯದ ಎಲ್ಲ ಜನರಿಗೆ ಉತ್ತಮ ಜೀವನೋಪಾಯ, ಸ್ವಚ್ಛ ಪರಿಸರ, ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಇತ್ಯಾದಿ ಗುರಿ ಗಳನ್ನು ತಲುಪಲು ಈ ಕ್ರಿಯಾ ಯೋಜನೆ ಒತ್ತು ನೀಡಲಿದೆ. ಹೆಚ್ಚು ಸುಧಾರಣೆಯ ಅಗತ್ಯವಿರುವ ಕ್ಷೇತ್ರ ಮತ್ತು ಕಾರ್ಯಕ್ರಮ ಗಳಿಗೆ ಮುಂದಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು’ ಎಂದೂ ಅವರು ತಿಳಿಸಿದರು.

ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಮಾತನಾಡಿ, ‘ಕರ್ನಾಟಕಕ್ಕಿಂತ ಉತ್ತಮ ಶ್ರೇಯಾಂಕ ಹೊಂದಿರುವ ಕೇರಳ, ಗುಜರಾತ್ ಮತ್ತು ಇತರ ರಾಜ್ಯಗಳಿಗೆ ಭೇಟಿ ನೀಡಿದ್ದು, ಆ ರಾಜ್ಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗಿದೆ. ಅದರ ವಿವರಗಳನ್ನು ಯೋಜನಾ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದರು.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ‘ಕೇಂದ್ರ ಸರ್ಕಾರದ ನೀತಿ ಆಯೋಗದ ಸೂಚನೆಯಂತೆ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ನಿವೃತ್ತ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈತಂಡಗಳು ಕಾರ್ಯಯೋಜನೆಗಳನ್ನು ರೂಪಿಸಿ ಸಲ್ಲಿಸಿದ್ದು, ಅವುಗಳನ್ನು ಬಜೆಟ್ನಲ್ಲಿ ಅಳವಡಿಸುವ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.

ಯೋಜನಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, ‘ನೀತಿ ಆಯೋಗ ಬಿಡುಗಡೆ ಮಾಡಿದ ಸುಸ್ಥಿರ ಅಭಿವೃದ್ಧಿ ಗುರಿಗಳ ಪೈಕಿ, ಕಡಿಮೆ ಅಂಕ ಪಡೆದಿರುವ ಗುರಿಗಳನ್ನು ಸಾಧಿಸಲು ಆದ್ಯತೆ ನೀಡುವ ಮೂಲಕ ಶ್ರೇಯಾಂಕವನ್ನು ಉತ್ತಮಪಡಿಸಬಹುದು’ ಎಂದರು.

ಕ್ರಿಯಾ ಯೋಜನೆಯ ವಿವರಗಳಿಗೆ planning.karnataka.gov.in ಲಿಂಕ್ ಕ್ಲಿಕ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.