ಬೆಂಗಳೂರು: ಸಾಹಿತ್ಯ ಸಮ್ಮೇಳನ ಸಾಹಿತ್ಯ ಪರಿಷತ್ಗೆ ಸೀಮಿತವಲ್ಲ, ರಾಜ್ಯ ಸರ್ಕಾರವೂ ಅನುದಾನ ಕೊಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರು ಜಿಲ್ಲಾ ಶಾಸಕರನ್ನು ಕರೆಯದೇ ಉಪ ಮುಖ್ಯಮಂತ್ರಿ ಅವರಿಗೆ ಆಹ್ವಾನ ಕೊಟ್ಟಿದ್ದಾರೆ. ಜಿಲ್ಲಾ ಮಂತ್ರಿ ಹಾಗೂ ಜಿಲ್ಲೆಯ ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದೇನೆ‘ ಎಂದರು.

‘ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ಬಳಿಯೂ ಚರ್ಚಿಸಿರುವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಳಿಯೂ ಈ ಕುರಿತು ಪ್ರಸ್ತಾಪಿಸುವೆ’ ಎಂದು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಇದೇ ನವೆಂಬರ್ ಅಂತ್ಯಕ್ಕೆ ಅಥವಾ ಡಿಸೆಂಬರ್ನಲ್ಲಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.