ಬೆಂಗಳೂರು: ಸದಾಶಿವನಗರದ ರಮಣ ಮಹರ್ಷಿ ಉದ್ಯಾನದಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಜಯಂತಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಅಶ್ವತ್ಥ ನಾರಾಯಣ ನಡುವೆ ವಾಕ್ಸಮರ ನಡೆಯಿತು.

ಡಿ.ಕೆ.ಶಿವಕುಮಾರ್ ಮಾತನಾಡಿ, ‘ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಶಾಸಕ ಅಶ್ವತ್ಥನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ಅದನ್ನು ಅವರು ತಿಳಿದುಕೊಳ್ಳಲಿ’ ಎಂದರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದಿದ್ದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ’ ಎಂದರು.

‘ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆಯಿದೆ. ಆ ಕೋಟೆ ಸಮೀಪ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆಯಿದ್ದು ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಶ್ವತ್ಥನಾರಾಯಣ, ‘ನನಗೂ ರಾಮನಗರಕ್ಕೂ ಏನು ಸಂಬಂಧ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ. ಹಿಂದೆ ಯಾವುದೇ ಸರ್ಕಾರವು ಕೊಡದಷ್ಟು ಯೋಜನೆಗಳನ್ನು ನಾವು ರಾಮನಗರಕ್ಕೆ ಕೊಟ್ಟಿದ್ದೇವೆ. ಜಿಲ್ಲೆಯನ್ನೇ ಅಭಿವೃದ್ಧಿ ಮಾಡಿದ್ದೇವೆ’ ಎಂದರು.

‘ರಾಮನಗರ ನನ್ನ ಪೂರ್ವಿಕರ ಕರ್ಮಭೂಮಿ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಮುಂದಿನ ದಿನಗಳಲ್ಲಿ ಎಲ್ಲ ಇತಿಹಾಸ ತಿಳಿಯಲಿದೆ. ನನ್ನ ಕೊಡುಗೆ ಏನು ಎಂಬುದು ಕೆಲಸವೇ ಮಾತನಾಡುತ್ತದೆ’ ಎಂದು ತಿರುಗೇಟು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.