ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಇದೇ 17 ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗವು ಗುರುವಾರ ಸಲ್ಲಿಸಿದ ಜ್ಞಾಪನಾ ಪತ್ರವನ್ನು (ಮೆಮೊ) ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ನೇತೃತ್ವದ ರಜಾ ಕಾಲದ ವಿಭಾಗೀಯ ನ್ಯಾಯಪೀಠ, ‘ಮೆಮೊ ಪರಿಗಣಿಸಲಾಗುವುದು’ ಎಂದು ತಿಳಿಸಿತು.

ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯ ಚುನಾವಣಾ ಆಯೋಗದ ಪರ ಹಾಜರಾದ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿ.ಪಂ. ತಾ.ಪಂ ಚುನಾವಣೆ ನಡೆಸಬೇಕಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೊ ಸಲ್ಲಿಸಲಾಗುತ್ತಿದೆ’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಇದೇ 17ರಂದು ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿದೆ.

ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ವಿಚಾರಣಾ ಹಂತದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.