ಬೆಂಗಳೂರು: ತಮಿಳುನಾಡಿನ ನಮ್ಮ ಸೋದರರ ಮೇಲೆ ಕೋಪವಾಗಲಿ, ದ್ವೇಷವಾಗಲಿ ಇಲ್ಲ. ಅವರು ನಮ್ಮ ಅಣ್ಣತಮ್ಮಂದಿರಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಅದರಲ್ಲಿ ಹೀಗೆ ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಟ್ವೀಟ್ ಹೀಗಿದೆ.

‘ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ ಆದರೆ ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲಿ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ, ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.