ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೇವಂತ್ ರೆಡ್ಡಿ ಪ್ರಮಾಣ ವಚನ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಭಾಗಿ

Published 6 ಡಿಸೆಂಬರ್ 2023, 15:06 IST
Last Updated 6 ಡಿಸೆಂಬರ್ 2023, 15:06 IST
ಅಕ್ಷರ ಗಾತ್ರ

ಬೆಳಗಾವಿ: ತೆಲಂಗಾಣದ ನೂತನ ಮುಖ್ಯಮಂತ್ರಿ ಆಗಿ ಟಿಪಿಸಿಸಿ (ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ) ಅಧ್ಯಕ್ಷ ರೇವಂತ್ ರೆಡ್ಡಿ ಅವರು ಶುಕ್ರವಾರ (ಡಿ.7) ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ರಾಜ್ಯ ಸಚಿವ ಸಂಪುಟದ ಬಹುತೇಕ ಸಚಿವರು ಭಾಗವಹಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ನಡೆಯಲಿದೆ. ರಾಜ್ಯದ ಜ್ಯೋತಿಷಿಯೊಬ್ಬರು ಪದಗ್ರಹಣದ ಮುಹೂರ್ತ ನಿಗದಿ‍ಪಡಿಸಿದ್ದಾರೆ ಎಂದು ಹೇಳಲಾಗಿದೆ.

ತೆಲಂಗಾಣ ಚುನಾವಣೆಯ ಉಸ್ತುವಾರಿ ವಹಿಸಿ ಮತ್ತು ಕ್ಷೇತ್ರಗಳನ್ನು ಹಂಚಿಕೊಂಡು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಚಿವರಾದ ಎನ್.ಎಸ್‌. ಬೋಸರಾಜು, ಬಿ.ಝೆಡ್‌. ಜಮೀರ್‌ ಅಹಮದ್‌ ಖಾನ್‌, ಶರಣಪ್ರಕಾಶ ಪಾಟೀಲ, ಕೆಲವು ಶಾಸಕರೂ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT