ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅನ್ನ ಪ್ರಸಾದಕ್ಕೆ ಬಳಸುವ ದಿನಸಿ ಪದಾರ್ಥಗಳ ಖರೀದಿ ಟೆಂಡರ್ನ ಕಾರ್ಯಾದೇಶ ನೀಡಲು ವಿಳಂಬ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2023ರ ನವೆಂಬರ್ 15ರಂದು ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿದೆ. ನಿಯಮಾನುಸಾರ ಕ್ರಮ ಕೈಗೊಂಡು, 15–20 ದಿನದಲ್ಲಿ ಕಾರ್ಯಾದೇಶ ನೀಡಲಾಗುತ್ತದೆ. ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು.

ಲಾಭ ವೆಚ್ಚಗಳಿಗೆ ವಿನಿಯೋಗ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಲಾಭದಲ್ಲೇ ಇವೆ. ಆದರೆ, ಲಾಭ ಬಂದರೂ ಅದೆಲ್ಲ ವೆಚ್ಚಕ್ಕೆ ವಿನಿಯೋಗ ಆಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿಯ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಡೀಸೆಲ್, ವೇತನ, ಬಿಡಿಭಾಗಗಳು ಪ್ರತಿನಿತ್ಯದ ವೆಚ್ಚಗಳಾಗಿದ್ದು, ಅವುಗಳೆಲ್ಲ ಹೆಚ್ಚಾಗುತ್ತಲೇ ಇವೆ. ಬಿಎಂಟಿಸಿ ಬಸ್ ಪ್ರಯಾಣ ದರ 2014ರಲ್ಲಿ ಏರಿಸಲಾಗಿತ್ತು. ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ 2020ರಲ್ಲಿ ಹೆಚ್ಚಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ಸಂಸ್ಥೆಗಳ ಪ್ರತಿನಿತ್ಯದ ವೆಚ್ಚಗಳು ದುಬಾರಿಯಾಗುತ್ತಲೇ ಇವೆ. ಹೀಗಾಗಿ ಲಾಭ ಗಳಿಸಲು ಸಾಧ್ಯವಾಗುತ್ತಿಲ್ಲ’ ಎಂದರು.

‘ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ₹1,413 ಕೋಟಿ ಬಿಡುಗಡೆ ಮಾಡಬೇಕಿದೆ. ಶೀಘ್ರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. 2024–25ನೇ ಬಜೆಟ್ನಲ್ಲಿ ಶಕ್ತಿ ಯೋಜನೆಗೆ ₹5,015 ಕೋಟಿ ಮೀಸಲಿಟ್ಟಿದ್ದು ಅನುದಾನದ ಕೊರತೆ ಇರುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.