ಶಾಲೆ ತಲುಪಿದ 3.40 ಕೋಟಿ ಪುಸ್ತಕ
‘ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ 57 ಲಕ್ಷ ಮಕ್ಕಳಿಗೆ (ಖಾಸಗಿ ಶಾಲೆಗಳನ್ನು ಹೊರತುಪಡಿಸಿ) 3.40 ಕೋಟಿಗೂ ಹೆಚ್ಚು ಪುಸ್ತಕಗಳು ಮುದ್ರಣಗೊಂಡಿವೆ. ಶೇ 90ರಷ್ಟು ಪುಸ್ತಕಗಳು ಶಾಲೆಗಳನ್ನು ತಲುಪಿವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಆರ್.ವಿಶಾಲ್ ‘ಪ್ರಜಾವಾಣಿ’ಗೆ ತಿಳಿಸಿದರು. ‘ಉಳಿದ ಪುಸ್ತಕಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿದ್ದು, ಒಂದೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ತಲುಪಲಿವೆ. ಶಾಲೆಗಳಿಗೆ ಸುರಕ್ಷಿತವಾಗಿ ತಲುಪಿಸಲು ಸಾಗಣೆ ವೆಚ್ಚವನ್ನೂ ಬಿಡುಗಡೆ ಮಾಡಲಾಗಿದೆ. ಮೇ 31ರಿಂದ ಅಧಿಕೃತವಾಗಿ ತರಗತಿಗಳೂ ಆರಂಭವಾಗಲಿವೆ’ ಎಂದು ಅವರು ಹೇಳಿದರು.