ಬೆಂಗಳೂರು: ಅಡಿಕೆ ಹಾನಿಕರವಲ್ಲ, ಔಷಧೀಯ ಗುಣವಿರುವ ಸಾಂಪ್ರ ದಾಯಿಕ ಬೆಳೆ ಎಂದು ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್‌ನ ವಿಜ್ಞಾನಿ ಗಳು ಸಂಶೋಧನಾ ವರದಿ ನೀಡಿದ್ದಾರೆ.

ವರದಿಯನ್ನು ಶೀಘ್ರವೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು.

ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನ ಕೇಂದ್ರ ಸರ್ಕಾರ, ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದರಿಂದ ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ ಇತ್ತು. ಅದಕ್ಕಾಗಿ ಅಡಿಕೆ ಕಾರ್ಯಪಡೆಯಿಂದಲೇ ವೈಜ್ಞಾನಿಕ ಸಂಶೋಧನೆ ನಡೆಸಲು ರಾಮಯ್ಯ ಇನ್‌ಸ್ಟಿಟ್ಯೂಟ್‌ಗೆ ವಹಿಸಲಾಗಿತ್ತು. ಈಗ ವರದಿ ಬಂದಿದೆ ಎಂದರು.

ಅಡಿಕೆ ಕ್ಷೇತ್ರ ವ್ಯಾಪ್ತಿ ಗಣನೀಯ ವಾಗಿ ಹೆಚ್ಚಳವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 6.11 ಲಕ್ಷ ಹೆಕ್ಟೇರ್ ಬೆಳೆ ಕ್ಷೇತ್ರವಿದೆ. ಅಡಿಕೆ ಭವಿಷ್ಯ ಗುಟ್ಕಾ ಕಂಪನಿಗಳ ಮೇಲೆ ನಿಂತಿದೆ. ದರ ಕುಸಿದರೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಾರೆ. ಹಾಗಾಗಿ, ಏಕ ಬೆಳೆ ಪದ್ಧತಿ ಸರಿಯಲ್ಲ ಎಂದು ಮನವರಿಕೆ ಮಾಡಿಕೊಡಬೇಕಿದೆ. ಉದ್ಯೋಗ ಖಾತ್ರಿಯಲ್ಲಿ ಅಡಿಕೆ ಬೆಳೆಗೆ ಸಹಾಯಧನ, ಪ್ರೋತ್ಸಾಹ ಬೇಡ ಎಂದು ತೋಟಗಾರಿಕಾ ಸಚಿವರನ್ನು ಕೋರಲಾಗಿದೆ ಎಂದರು.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ 42,504 ಹೆಕ್ಟೇರ್‌ನಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 17,267 ರೈತರಿಗೆ ಔಷಧ ಖರೀದಿಗೆ ಸಹಾಯ ಮಾಡಲಾಗಿದೆ. ಹೆಕ್ಟೇರ್‌ಗೆ ₹ 15 ಸಾವಿರದಂತೆ ಸಹಾಯಧನ ನೀಡಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.