ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಸಿಂಹಪಾಲು ಬಿಜೆಪಿ ಆಡಳಿತದ ಉತ್ತರ ಪ್ರದೇಶದ್ದು ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮಹಿಳೆಯರ ಸುರಕ್ಷತೆಯ ಬಗ್ಗೆ ಚಿಂತಿಸದ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ಅವರ ಸರ್ಕಾರಗಳು ಅತ್ಯಾಚಾರ ಆರೋಪಿಗಳ ಪರವಾಗಿ ನಿಲ್ಲುವಂತಹ ಕ್ರಮ ಕೈಗೊಂಡಿವೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಧ್ವನಿ ಎತ್ತಬೇಕಿದೆ’ ಎಂದು ಆಗ್ರಹಿಸಿದೆ.

ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಈ ಎರಡು ವರ್ಷದಲ್ಲಿ ಬರೀ ಅಧಿಕಾರ ಕೇಂದ್ರಿತ ಕಿತ್ತಾಟದಲ್ಲಿಯೇ ಕಳೆದಿದೆ. ಮುಂದೆಯೂ ಪ್ರತಿ ದಿನವೂ ಇದು ಮುಂದುವರೆಯಲಿದೆ. ಜನಪರವಾಗಿ ಒಂದು ದಿನವೂ ಕೆಲಸ ಮಾಡದ ಬಿಜೆಪಿ ಸರ್ಕಾರ, ದುರಾಡಳಿತವನ್ನು ಪ್ರಶ್ನಿಸುವ ವಿಪಕ್ಷ ನಾಯಕರನ್ನು ನಿಂದಿಸುವ ಬದಲು ಉಳಿದ ಸ್ವಲ್ಪ ಸಮಯದಲ್ಲಿಯಾದರೂ ಜನರಿಗಾಗಿ ಕೆಲಸ ಮಾಡಲಿ’ ಎಂದು ವ್ಯಂಗ್ಯವಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.