“ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ”
— Siddaramaiah (@siddaramaiah) October 12, 2024
ಕೇಂದ್ರದ @BJP4India ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ. 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ… pic.twitter.com/kNC8yCByl3
ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನು ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31,962 ಕೋಟಿ, ಬಿಹಾರಕ್ಕೆ ರೂ.17,921 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987 ಕೋಟಿ ಮತ್ತು ರಾಜಸ್ತಾನಕ್ಕೆ… pic.twitter.com/AeCV09mxyM
— Siddaramaiah (@siddaramaiah) October 12, 2024
ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.713 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.647ಕ್ಕೆ ಇಳಿಸಿತು. ಇದರಿಂದ 2021-26 ರವರೆಗಿನ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ ₹62,275 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯವನ್ನು ಪರಿಗಣಿಸಿದ್ದ ಹಣಕಾಸು…
— Siddaramaiah (@siddaramaiah) October 12, 2024
ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಇದರ ಜೊತೆಗೆ ಅನುದಾನದ ರೂಪದಲ್ಲಿ ಅಂದಾಜು ₹15,000 ಕೋಟಿ ಸೇರಿರುತ್ತದೆ. ಇವೆಲ್ಲ ಕೂಡಿದರೆ ಕರ್ನಾಟಕ @narendramodi ಅವರ ಸರ್ಕಾರಕ್ಕೆ ನೀಡುತ್ತಿರುವ…
— Siddaramaiah (@siddaramaiah) October 12, 2024
ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ @nsitharaman ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ… pic.twitter.com/8AalsXcGyH
— Siddaramaiah (@siddaramaiah) October 12, 2024
ಪ್ರಧಾನಿ @narendramodi ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲು ಯೋಜನಾ ಆಯೋಗವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರಗಳಿಗೆ ದನಿಯೇ ಇಲ್ಲದ ರೀತಿಯಲ್ಲಿ ನೀತಿ ಆಯೋಗವನ್ನು ರಚಿಸಲಾಯಿತು. ಅದರ ಬೆನ್ನಲ್ಲಿಯೇ ಹದಿನೈದನೇ ಹಣಕಾಸು ಆಯೋಗವನ್ನು ರಚಿಸಿ ಅದರ ಕಾರ್ಯೋದ್ದೇಶಗಳನ್ನು ನಿಗದಿಗೊಳಿಸುವ ಮಾರ್ಗಸೂಚಿ ಅಂಶಗಳಲ್ಲಿ ಬದಲಾವಣೆ… pic.twitter.com/l0I9r9tKHj
— Siddaramaiah (@siddaramaiah) October 12, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.