ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಗಳು ನಡೆಸುತ್ತಿರುವ ಶೈಕ್ಷಣಿಕ ಸಂಸ್ಥೆಗಳು ಆಯಾ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಕನಿಷ್ಠ ಶೇಕಡ ಇಂತಿಷ್ಟು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತು ರದ್ದುಪಡಿಸಿ ರಾಜ್ಯ ಸರ್ಕಾರ ಮಾರ್ಚ್ 16ರಂದು ಆದೇಶ ಹೊರಡಿಸಿದೆ.

ಅಲ್ಪಸಂಖ್ಯಾತ ಸಮುದಾಯಗಳು ನಡೆಸುತ್ತಿರುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಸಂಸ್ಥೆಗಳೆಂದು ಘೋಷಿಸಲು ಇಂತಿಷ್ಟು ಪ್ರಮಾಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕು ಎಂಬ ನಿಯಮವನ್ನು ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ತಾಂತ್ರಿಕ ಇಲಾಖೆ, ಮತ್ತು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ರೂಪಿಸಿದೆ.

ಆದರೆ, ನಿಗದಿಪಡಿಸಿದ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸಿಗದ ಕಾರಣ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಸಮುದಾಯವರು ನಡೆಸುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಸಂಸ್ಥೆಗಳಾಗಿ ಘೋಷಿಸಲು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ನಿಯಮ ರದ್ದುಪಡಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಸಚಿವ ಸಂಪುಟ ಸಭೆಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವಕ್ಕೆ ಮಾರ್ಚ್ 12ರಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.