ಬೆಂಗಳೂರು: 40 ಜನರಿಗೆ ಮಿತಿಗೊಳಿಸಿ ರಾಜ್ಯದಾದ್ಯಂತ ಕಲ್ಯಾಣ ಮಂಟಪ, ಹೋಟೆಲ್ ಸಭಾಂಗಣ ಮತ್ತು ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸೋಮವಾರದಿಂದ ಅನುಮತಿ ನೀಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

ರೂಪಾಂತರಿ ಡೆಲ್ಟಾ ಕೊರೊನಾ ವೈರಾಣು ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ. ಪಾಸ್ ಹೊಂದಿರುವವರು ಮಾತ್ರ ಮದುವೆಯಲ್ಲಿ ಭಾಗವಹಿಸಬೇಕು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಂಡ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎದು ಆದೇಶದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರು ಮತ್ತು ಇತರ ಪ್ರದೇಶಗಳಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳಿಂದ ಅನುಮತಿ ಪಡೆದು ಮದುವೆ ಸಮಾರಂಭಗಳನ್ನು ನಡೆಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.