ಬೆಂಗಳೂರು: ಬೆಂಗಳೂರು–ಧಾರವಾಡ ಮಧ್ಯೆ ‘ವಂದೇ ಭಾರತ್’ ಇಂಟರ್ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು (ಸೋಮವಾರ) ಪ್ರಾಯೋಗಿಕ ಸಂಚಾರ ಆರಂಭಿಸಿದೆ.

ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಟ್ವಿಟರ್ನಲ್ಲಿ ಹಂಚಿಕೊಂಡಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 12.10ಕ್ಕೆ ಹುಬ್ಬಳ್ಳಿಗೆ ಬಂದು 12.40ಕ್ಕೆ ಧಾರವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಧಾರವಾಡದಿಂದ ಹೊರಡಲಿದೆ. 1.35ಕ್ಕೆ ಹುಬ್ಬಳ್ಳಿಗೆ, 3.48ಕ್ಕೆ ದಾವಣಗೆರೆಗೆ, ರಾತ್ರಿ 7.45ಕ್ಕೆ ಯಶವಂತಪುರಕ್ಕೆ ಬಂದು ರಾತ್ರಿ 8.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಜೂನ್ 26ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ.

ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು–ಧಾರವಾಡದ ಅಂತರ 487 ಕಿಲೋಮೀಟರ್ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ತಿರುವುಗಳು ಹೆಚ್ಚಿರುವುದು ವೇಗ ಕಡಿಮೆಯಾಗಲು ಕಾರಣ.

ಓದಿ... ವಂದೇ ಭಾರತ್ ರೈಲು 19ಕ್ಕೆ ಪ್ರಾಯೋಗಿಕ ಸಂಚಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.