ಬೆಂಗಳೂರು: ‘ಸಿದ್ದರಾಮಯ್ಯನವರು ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು? ಅವರು ರಾಜೀನಾಮೆ ನೀಡುವ ಅಗತ್ಯವೇ ಇಲ್ಲ’ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರ್ಕಾರ. 50:50 ಅನುಪಾತದಲ್ಲಿ ಮುಖ್ಯಮಂತ್ರಿ ಪತ್ನಿ ಒಬ್ಬರಿಗೆ ಮಾತ್ರ ನಿವೇಶನ ಕೊಟ್ಟಿಲ್ಲ. ನೂರಾರು ಜನರಿಗೆ ನಿವೇಶನಗಳನ್ನು ಕೊಟ್ಟಿದ್ದಾರೆ. ಇವರೊಬ್ಬರಿಗೆ ನಿವೇಶನ ಕೊಟ್ಟಿದ್ದರೆ ಟೀಕೆ ಮಾಡಬಹುದಿತ್ತು. ಕಾನೂನು ಬಾಹಿರವಾಗಿದ್ದರೆ ಸರ್ಕಾರ ಅಂದೇ ವಜಾ ಮಾಡುತ್ತಿತ್ತು’ ಎಂದರು.

‘ಅಭಿವೃದ್ದಿ ವಿಷಯಗಳ ಬಗ್ಗೆ ಮಾತನಾಡದ ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ. ಸುಮ್ಮನೆ ಗಲಾಟೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ. ದುರುದ್ದೇಶದಿಂದ ಅವರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.