ಬೆಂಗಳೂರು: ‘ಮುಂದಿನ ವರ್ಷದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಮತ್ತು ಆದರ್ಶ ವಿದ್ಯಾಲಯಗಳಲ್ಲಿ ವಿಜ್ಞಾನ ವಿಷಯ ಕಲಿಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿಗೆ ಉಚಿತ ತರಬೇತಿ ವಿಸ್ತರಿಸುವ ಚಿಂತನೆಯಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗರಾಪ್ಪ ಹೇಳಿದರು.

ಪೇಸ್ ಸಂಸ್ಥೆಯಿಂದ ಈ ವರ್ಷ ಒಟ್ಟು 25 ಸಾವಿರ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ಉಚಿತ ತರಬೇತಿಗೆ ಬುಧವಾರ ಚಾಲನೆ ನೀಡಿ, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಜೊತೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ವೈದ್ಯರು, ಎಂಜಿನಿಯರ್ ಆಗಬೇಕೆಂಬ ಬಡವರ ಮಕ್ಕಳ ಕನಸು ನನಸಾಗಿಸಲು, ಪಾಲಕರಿಗೆ ತರಬೇತಿ ವೆಚ್ಚದ ಹೊರೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಈ ವ್ಯವಸ್ಥೆ ಮಾಡಿದೆ. ಈ ವರ್ಷ ಪಿಯು ವಿಜ್ಞಾನ ಮೊದಲ ಮತ್ತು ಎರಡನೇ ವರ್ಷದ ಒಟ್ಟು 10 ಸಾವಿರ ಮತ್ತು ಆದರ್ಶ ವಿದ್ಯಾಲಯದ ಐದು ಸಾವಿರ ಸೇರಿ ಒಟ್ಟು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗೆ ಪ್ರತ್ಯೇಕ ಲಾಗಿನ್ ಐಡಿ, ಪುಸ್ತಕಗಳನ್ನು ವಿತರಿಸಲಾಗುವುದು. ಪ್ರತಿದಿನದ ತರಗತಿಗೆ ಮೊದಲು ಮತ್ತು ನಂತರ ತಲಾ ಒಂದು ಗಂಟೆ ಆನ್ಲೈನ್ನಲ್ಲೇ ತರಬೇತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಲಾಗುವುದು’ ಎಂದರು.

‘ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಯೋಜನೆ ಪ್ರಕಟಿಸಿ ₹12.50 ಕೋಟಿಯನ್ನು ಮುಖ್ಯಮಂತ್ರಿ ಮೀಸಲಿರಿಸಿದ್ದಾರೆ. ಟೆಂಡರ್ನಲ್ಲಿ ಭಾಗವಹಿಸಿದ್ದ ಪೇಸ್ ಸಂಸ್ಥೆ ₹7 ಕೋಟಿಗೆ ಒಪ್ಪಂದ ಮಾಡಿಕೊಂಡಿದೆ. ಪ್ರಸಕ್ತ ಸಾಲಿನ ಮತ್ತು ಮುಂದಿನ ವರ್ಷದ ತರಬೇತಿಯನ್ನು ಇದೇ ಸಂಸ್ಥೆ ನಿರ್ವಹಿಸಲಿದೆ’ ಎಂದರು.

ಪೇಸ್ ಸಂಸ್ಥೆ ನಿರ್ದೇಶಕ ಪ್ರವೀಣ್ ತ್ಯಾಗಿ ಮಾತನಾಡಿ, ‘ಬಡ ಮಕ್ಕಳಿಗೆ ನೀಟ್, ಜೆಇಇ, ಸಿಇಟಿ ಎದುರಿಸಲು ಉಚಿತ ತರಬೇತಿ ನೀಡುವ ಅವಕಾಶ ನಮ್ಮ ಸಂಸ್ಥೆಗೆ ಲಭಿಸಿರುವುದು ಖುಷಿ ತಂದಿದೆ’ ಎಂದರು.

ಸಂವಾದದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ‘ರಾಜ್ಯದ ಸರ್ಕಾರಿ ಪಿಯು ಕಾಲೇಜಿನ ಎಲ್ಲ ವಿಜ್ಞಾನ ವಿದ್ಯಾರ್ಥಿಗಳಿಗೆ ಈ ತರಬೇತಿಯನ್ನು ವಿಸ್ತರಿಸಬೇಕು’ ಎಂದು ಸಚಿವರ ಬಳಿ ಮನವಿ ಮಾಡಿದರು. ಆನ್ಲೈನ್ ಸಂವಾದದಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದ್ದರು.

‘ಸುಪ್ರೀಂ’ಗೆ ಮನವಿ: ‘ಸುಪ್ರೀಂ ಕೋರ್ಟ್ ಆದೇಶದಂತೆ ಐದು, ಎಂಟು, ಒಂಬತ್ತನೇ ತರಗತಿಗೆ ಮಂಡಳಿ ಪರೀಕ್ಷೆಯನ್ನು ಕೈಬಿಡಲಾಗಿದೆ. ಆದರೆ, ಈ ಮೂರು ತರಗತಿಗಳ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸುವುದಕ್ಕೆ ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಾಗಿದೆ. ಕೋರ್ಟ್ ಒಪ್ಪಿಗೆ ನೀಡಿದ ತಕ್ಷಣ ಫಲಿತಾಂಶ ಪ್ರಕಟಿಸಲಾಗುವುದು’ ಎಂದೂ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಇದ್ದರು.

‘15 ಸಾವಿರ ಹುದ್ದೆ ಭರ್ತಿಗೆ ಪ್ರಸ್ತಾವ’

‘ಪಿಯು ವಿಜ್ಞಾನ ಉಪನ್ಯಾಸಕರ 800 ಹುದ್ದೆಗಳು ಸೇರಿ ಶಾಲಾ ಶಿಕ್ಷಕರ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಮಧು ಬಂಗಾರಪ್ಪ ತಿಳಿಸಿದರು.

‘ಕಲ್ಯಾಣ ಕರ್ನಾಟಕ ಐದು ಸಾವಿರ ಹುದ್ದೆಗಳ ಭರ್ತಿಗೆ ಈಗಾಗಲೇ ಮಂಜೂರಾತಿ ದೊರೆತಿದೆ. ಅದನ್ನು ಹೊರತುಪಡಿಸಿ ಇನ್ನೂ 15 ಸಾವಿರ ಶಿಕ್ಷಕರ ಹುದ್ದೆಗಳನ್ನು ತುಂಬುವ ಅಗತ್ಯವಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಹಂಚಿಕೆಗೆ ಸಂಬಂಧಿಸಿದಂತೆ ಸರ್ಕಾರ ಕ್ರಮ ತೆಗೆದುಕೊಂಡ ಬಳಿಕ ಕಲ್ಯಾಣ ಕರ್ನಾಟಕದ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.