ಬೆಂಗಳೂರು: ‘ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಗಂಭೀರವಾದ ವಿಚಾರ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ‘ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ’ ಎಂಬ ಎಚ್ಚರಿಕೆ ನೀಡಿದ್ದರ ಕುರಿತು ಮೈಕ್ರೊ ಬ್ಲಾಗಿಂಗ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂನ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು’ ಎಂದಿದ್ದಾರೆ.
.ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ: ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ.ಆಳ –ಅಗಲ: ಬಿಜೆಪಿಯೇತರ ಪಕ್ಷಗಳಿರುವ ರಾಜ್ಯ ಸರ್ಕಾರಗಳಿಗೆ ರಾಜ್ಯಪಾಲರ ಕಿರುಕುಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.