ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್–ಕಾಂಗ್ರೆಸ್ ಮೈತ್ರಿಕೂಟ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ.

ಈ ವರ್ಷ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಒತ್ತಾಯಿಸಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು. ‘ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿರೋಧ ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ಆಚರಿಸಿಯೇ ಸಿದ್ಧ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದರು.

ಚುನಾವಣೆ ಸಮಯದಲ್ಲಿ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತದೆ. ಅವರನ್ನು ಹೇಗೆ ನಿಶಸ್ತ್ರಗೊಳಿಸಬೇಕು ಎಂಬುದು ಮೈತ್ರಿ ಸರ್ಕಾರಕ್ಕೆ ಗೊತ್ತಿದೆ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಸಿದ್ಧಾಂತದ ಕಾರಣಕ್ಕೆ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿಯವರು ವಿರೋಧ ಮಾಡಿಕೊಂಡೇ ಬರುತ್ತಿದ್ದಾರೆ. ಆದರೆ, ನಾವು ಆಚರಣೆ ಮಾಡಲಿದ್ದೇವೆ.

-ಡಾ.ಜಿ.ಪರಮೇಶ್ವರ,ಗೃಹ ಸಚಿವ

ಟಿಪ್ಪು ಜಯಂತಿ ಆಚರಣೆ ಮೂಲಕ ರಾಜ್ಯ ಸರ್ಕಾರ ಕೊಲೆ ದಂಗೆಯಂತಹ ಪ್ರಕರಣಗಳಿಗೆ ಪ್ರಚೋದನೆ ನೀಡುತ್ತಿದೆ. ಪದೇ ಪದೇ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಜಯಂತಿ ಆಚರಣೆ ಮಾಡಬಾರದು.

-ಕೆ.ಎಸ್.ಈಶ್ವರಪ್ಪ, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.