ನವದೆಹಲಿ: ದೇಶದಲ್ಲಿ 2022–23ನೇ ಸಾಲಿನಲ್ಲಿ 10,331 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದ್ದರೆ, ಈ ಆರ್ಥಿಕ ವರ್ಷದ ನವೆಂಬರ್ ಅಂತ್ಯದ ವರೆಗೆ 5,248 ಕಿ.ಮೀ. ಹೆದ್ದಾರಿಯಷ್ಟೇ ನಿರ್ಮಾಣವಾಗಿದೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹಲವು ಸಲ ಹೇಳಿಕೆಗಳನ್ನು ನೀಡಿದ್ದರು. ಆದರೆ, ಸಚಿವಾಲಯವು ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿ –ಅಂಶಗಳ ಪ್ರಕಾರ, ಹೆದ್ದಾರಿ ನಿರ್ಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.

ಇನ್ನೊಂದೆಡೆ, ಕಳೆದ ಐದು ವರ್ಷಗಳಲ್ಲಿ ಟೋಲ್ ರಸ್ತೆಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಟೋಲ್ ಸಂಗ್ರಹ ಪ್ರಮಾಣ ದುಪ್ಪಟ್ಟಾಗಿದೆ. ಫಾಸ್ಟ್ ಟ್ಯಾಗ್ ಮೂಲಕ ಪ್ರತಿದಿನ ₹147 ಕೋಟಿ ಸಂಗ್ರಹವಾಗುತ್ತಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 13,814 ಕಿಲೋಮೀಟರ್‌ಗಳ ಹೆದ್ದಾರಿ ನಿರ್ಮಾಣ ಗುರಿಯನ್ನು ಸಾಧಿಸುವ ವಿಶ್ವಾಸ ಹೊಂದಿದ್ದೇವೆ ಎಂದು ಸಚಿವಾಲಯದ ಕಾರ್ಯದರ್ಶಿ ಅನುರಾಗ್ ಜೈನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.