ಬೆಂಗಳೂರು: ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಮತ್ತು ಇಲಾಖೆಯಲ್ಲಿ 2022 ಮತ್ತು 2023ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ‘ಮುಖ್ಯಮಂತ್ರಿ ಪದಕ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಸೆ.3) ಪ್ರದಾನ ಮಾಡಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಜೆ 4 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

‘310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್ಸೆಸ್ಸೆಲ್ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ’ ಎಂದು ಖಂಡ್ರೆ ಎಂದು ತಿಳಿಸಿದ್ದಾರೆ.

‘ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಸದ್ಯಕ್ಕೆ ನೇಮಕಾತಿ ಪತ್ರ ನೀಡುವುದಿಲ್ಲ’ ಎಂದೂ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಪದಕ:

ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ 2017ರಿಂದ ‘ಮುಖ್ಯಮಂತ್ರಿ ಪದಕ’ ನೀಡಲಾಗುತ್ತಿದೆ. 2022 ಮತ್ತು 2023ನೇ ಸಾಲಿನಲ್ಲಿ ಒಟ್ಟು 49 ಅಧಿಕಾರಿ, ಸಿಬ್ಬಂದಿಗೆ ‘ಮುಖ್ಯಮಂತ್ರಿ ಪದಕ’ ಪ್ರದಾನ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದೂ ಖಂಡ್ರೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.