ಬೆಂಗಳೂರು: ಲೋಕಾಯುಕ್ತದ ಮೂವರು ಎಸ್ಪಿಗಳೂ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್ಐಟಿ) ಎಸ್ಪಿ ಎಂ. ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಹುದ್ದೆಯಲ್ಲಿದ್ದ ಸಜೀತ್ ವಿ.ಜೆ. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳ ಎಸ್ಪಿ ಯಶೋಧಾ ವಂಟಿಗೋಡಿ ಅವರನ್ನು ಲೋಕಾಯುಕ್ತ ಎಸ್ಪಿ ಹುದ್ದೆಗೆ ವರ್ಗಾಯಿಸಿದ್ದು, ಲೋಕಾಯುಕ್ತ ಎಸ್ಪಿ ಹುದ್ದೆಯಲ್ಲಿದ್ದ ರಾಮ ಎಲ್.ಅರಸಿದ್ದಿ ಅವರನ್ನು ಕೊಪ್ಪಳ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.